December 6, 2021

Vijayanews

#1 digital newspaper

ಉಚ್ಚಂಗಿದುರ್ಗ: ನಾಳೆಯಿಂದ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಅವಕಾಶ

ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಐತಿಹಾಸಿಕ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಸೋಮವಾರದಿಂದ ಭಕ್ತರಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಭಾನುವಾರ ಮುಜರಾಯಿ ಇಲಾಖೆ ಸಿಬ್ಬಂದಿ ಸ್ಯಾನಿಟೈಸರ್ ಸಿಂಪರಣೆ ಮಾಡಿದರು.

ಉಚ್ಚಂಗಿದುರ್ಗ: ನಾಳೆಯಿಂದ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಅವಕಾಶ

ಹರಪನಹಳ್ಳಿ: ಉತ್ತರ ಹಾಗೂ ಮಧ್ಯೆಕರ್ನಾಟಕದುದ್ದಗಲಕ್ಕೂ ಲಕ್ಷಾಂತರ ಭಕ್ತರನ್ನು ಹೊಂದಿರುವ ಐತಿಹಾಸಿಕ ಪರಂಪರೆಯ ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಸೋಮವಾರದಿಂದ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಧಾರ್ಮಿಕದತ್ತಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮಲ್ಲಪ್ಪ ತಿಳಿಸಿದ್ದಾರೆ.

ಕೊವೀಡ್-19 ವೈರಸ್ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಹಂತ ಹಂತವಾಗಿ ಸಾರ್ವಜನಿಕ ವಲಯಗಳಲ್ಲಿನ ಚಟುವಟಿಕೆಗಳನ್ನು ಸಹಜ ಸ್ಥಿತಿಯತ್ತ ತರಲು ಮುಂದಾಗಿದೆ. ಹೀಗಾಗಿ, ಉಚ್ಚಂಗಿದುರ್ಗದ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಸೋಮವಾರದಿಂದ ಭಕ್ತಾಧಿಗಳು ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.  ಆದರೆ, ಕೋವಿಡ್ ಮಾರ್ಗಸೂಚಿಯ ಅನ್ವಯ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ, ಜಾತ್ರೆ, ಉತ್ಸವ ಸಾಮೂಹಿಕ ದಾಸೋಹ ಹಾಗೂ ವಸತಿಗೃಹಗಳಲ್ಲಿ ತಂಗುವಿಕೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳಿಗೆ ಇನ್ನೂ ಅವಕಾಶ ಕಲ್ಪಿಸಿಲ್ಲ ಎಂದು ಮಲ್ಲಪ್ಪ ತಿಳಿಸಿದ್ದಾರೆ.

ಸೋಮವಾರದಿಂದ ದೇವಿಯ ದರ್ಶನಕ್ಕೆ  ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಸಿಬ್ಬಂದಿ ಭಾನುವಾರ ದೇವಸ್ಥಾನ ಹಾಗೂ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಜತೆಗೆ ಸ್ಯಾನಿಟೈಸರ್ ಸಿಂಪಡಿಸಿದರು.

ಕೂಲಹಳ್ಳಿ: ಗೋಣಿಬಸವೇಶ್ವರಸ್ವಾಮಿ ದರ್ಶನಕ್ಕೂ ಅವಕಾಶ

ಹರಪನಹಳ್ಳಿ: ಪವಾಡಪುರುಷ, ಪಂಚಗಣಾಧೀಶ ಪರಂಪರೆಯ ತಾಲ್ಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರಸ್ವಾಮಿ ದರ್ಶನಕ್ಕೂ ಸೋಮವಾರದಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿಯೂ ಅದ ತಹಶೀಲ್ದಾರ್ ನಂದೀಶ್ ತಿಳಿಸಿದ್ದಾರೆ.